April 2, 2025
ತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಲಲಿತಾ ಟೀಚರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಶುಭ ಕೋರಿದರು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಬಿಲ್ಲವ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್ ,ಮಾಜಿ ಅಧ್ಯಕ್ಷ ವೈ ನೋಣಯ್ಯ ಪೂಜಾರಿ, ಸಂಘದ ಪ್ರ.ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ: ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮದಲ್ಲಿ ಆಟಿ ತಿಂಗಳಲ್ಲಿ ಸಿಗುವ ತಿಂಡಿ ತಿನಿಸುಗಳು ಪ್ರದರ್ಶನವನ್ನು ಮಾಡಲಾಯಿತು. ಸಂಘದ ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ತಮ್ಮ ಮನೆಯಲ್ಲಿಯೇ ತಯಾರಿಸಿದ ತಿಂಡಿ, ತಿನಿಸುಗಳನ್ನು ತಂದು ಪ್ರದರ್ಶಿಸಿ ಎಲ್ಲರಿಗೂ ಹಂಚಿದರು.

ಬಹುಮಾನ ವಿತರಣೆ: ಕಾರ್ಯಕ್ರಮದಲ್ಲಿ ಮಕ್ಕಳಿಗೆ,ಯುವಕ,ಯುವತಿಯರಿಗೆ ವಿವಿಧ ಫನ್ನಿ ಗೇಮ್ ನಡೆಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya
error: Content is protected !!