27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

ಬಳಂಜ: ಬಳಂಜ‌ ಗ್ರಾಮ‌ಪಂಚಾಯತ್ ನ‌ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಶೋಭಾ ಕುಲಾಲ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಯಶೋಧರ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭವು ಕಾಪಿನಡ್ಕ ಶಿವಗಿರಿ ನಿವಾಸದ ವಠಾರದಲ್ಲಿ ನಡೆಯಿತು.

ಬಿಜೆಪಿ ಬಳಂಜ ಪಂಚಾಯತ್ ಮಟ್ಟದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು.

ವೇದಿಕೆಯಲ್ಲಿ ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಹೊಳ್ಳ, ಬಳಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ,ಮಾಜಿ ಉಪಾಧ್ಯಕ್ಷೆ ಬೇಬಿ ನಾರಾಯಣ, ಬಿಜೆಪಿ ಪಂಚಾಯತ್ ಮಟ್ಟದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಳಂಜ ಗ್ರಾಮ‌ ಪಂಚಾಯತ್ ಸದಸ್ಯರು, ಕಾರ್ಯಕರ್ತರು,ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya
error: Content is protected !!