25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಉಜಿರೆ: ಮನಸ್ಸಿನ ಉಲ್ಲಾಸಕ್ಕಾಗಿ ಕ್ರೀಡೆ ಸಹಕಾರಿ, ದಿನದೆ ಒಂದು ಗಂಟೆ ಆಟ ಎಲ್ಲಾ ತರಹದ ಜಡತ್ವವನ್ನು ಹೋಗಲಾಡಿಸುತ್ತದೆ. ಶಿಕ್ಷಣದಲ್ಲಿ ದೈಹಿಕ ಶಿಕ್ಷಣವು ಅದರ ಅವಿಭಾಜ್ಯ ಅಂಗ. ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಂಡಾಗ ಕಲಿಕೆಯು ಸರಾಗವಾಗಿ ಸಾಗುತ್ತದೆ.” ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ ಸೋಮಶೇಖರ ಶೆಟ್ಟಿ ಹೇಳಿದರು.


ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮುಖ್ಯ ಅತಿಥಿ ಸ್ಥಾನದಲ್ಲಿ ಮಾತನಾಡುತ್ತಿದ್ದರು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ “ಕ್ರೀಡೆ ಮನಸ್ಸನ್ನು ಉಲ್ಲಾಸದಲ್ಲಿರಿಸಿ ಪ್ರೇರಣೆಗೆ ಕಾರಣವಾಗುತ್ತದೆ” ಎಂದು ಹೇಳಿದರು.


ಬೆಳ್ತಂಗಡಿ ದೈಹಿಕ ಶಿಕ್ಷಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ಶುಭ ಹಾರೈಸಿದರು.
ವೇದಿಕೆಯಲ್ಲಿ ದಕ್ಷಿಣಕನ್ನಡ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾನಂದ, ಕರ್ನಾಟಕ ರಾಜ್ಯ ನೌಕರರ ಸಂಘದ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಯರಾಜ್ ಜೈನ್, ಎಸ್ ಡಿ ಎಂ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಉಪಸ್ಥಿತರಿದ್ದು, ಶುಭ ಕೋರಿದರು.


ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಎನ್ ಸ್ವಾಗತಿಸಿ, ಶಿಕ್ಷಕ ಜಯರಾಮ ಮಯ್ಯ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ್ ನಿರೂಪಿಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸದಾನಂದ ಸಂಘಟಿಸಿದ್ದರು.

Related posts

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!