ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ಉಪನ್ಯಾಸಕ ಡಾ.ರವೀಶ್ ಪಡುಮಲೆ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.
ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಬಹಳಷ್ಟು ಕಷ್ಟದ ಬದುಕನ್ನ ನಡೆಸುತ್ತಿದ್ದರು, ಆಟಿ ಎಂಬುದು ತುಳುನಾಡಿನ ತುಳುವರ ಒಂದು ವಿಶೇಷ ತಿಂಗಳಾಗಿದ್ದು ನಮ್ಮ ಹಿರಿಯರ ಅಂದಿನ ಬದುಕನ್ನು ಇಂದು ನಾವೆಲ್ಲರೂ ಆಟಿ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳ ಜೋಡಣೆಯೊಂದಿಗೆ ನೆನಪು ಮಾಡಿಕೊಳ್ಳುತ್ತಿದ್ದೇವೆ. ಹಿರಿಯರು ತೋರಿಸಿದ ದಾರಿಯಲ್ಲಿ ಮುನ್ನಡೆದರೆ ನಮ್ಮ ಜೀವನದಲ್ಲಿ ಯಶಸ್ಸು ಗಳಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದ ವಿವಿಧ ಹಳೆಯ ವಸ್ತುಗಳನ್ನು ಮತ್ತು ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.