ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಅರಸಿನಮಕ್ಕಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ( ರಿ) ಬೆಳ್ತಂಗಡಿ. ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿ ಬಂದು, ಸ್ವಸಹಾಯ ಸಂಘಗಳ ಒಕ್ಕೂಟ ಅರಸಿನಮಕ್ಕಿ ವಲಯ ಮತ್ತು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜ್ ಅರಸನಮಕ್ಕಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಸಾಂಕೇತಿಕವಾಗಿ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾದ ಜಯರಾಮ್ ಕೂ ಕುಂಚ್ ಆರ್ಟ್ಸ್ ಕಲಾವಿದರು ಮಾದಕ ವ್ಯಸನವೆಂಬುದೊಂದು ಭೀಕರ ರೋಗ ಈ ರೋಗಕ್ಕೆ ತುತ್ತಾಗದೆ ತಮ್ಮ ಉತ್ತಮ ಭವಿಷ್ಯ ಹಾಗೂ ಉತ್ತಮ ಆರೋಗ್ಯವನ್ನು ಪಡೆದು ಒಳ್ಳೆಯ ಪ್ರಜೆಯಾಗಿ ಬಾಳೋಣವೆಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಶಶಿಕಲಾ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಲಯ, ಶ್ರೀಮತಿ ಮಂಜುಳಾ ಕೊರಂಟೈನ್ ಮತ್ತು ಚೆನ್ನಪ್ಪ ಗೌಡ ತಾಲೂಕಿನ ಜನಜಾಗೃತಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರ , ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಸೇವಾ ಪ್ರತಿನಿಧಿ ಯಮುನಾ ಮತ್ತು ರೂಪ ಉಪಸ್ಥಿತರಿದ್ದರು.

ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಶಿಕ್ಷಕ ವೃಂದದವರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. 160 ವಿದ್ಯಾರ್ಥಿಗಳು ಈ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Leave a Comment

error: Content is protected !!