24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

ಲಾಯಿಲ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ  ಇತ್ತೀಚೆಗೆ  ಸಮಿತಿಯ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ 2022ನೇ ಸಾಲಿನ ಕಾರ್ಯಕ್ರಮಗಳ ವರದಿಗಳನ್ನು ಕಾರ್ಯದರ್ಶಿ ಅನಿಲ್ ವಿಕ್ರಂ ಡಿಸೋಜಾ ಸಭೆಯ ಮುಂದಿಟ್ಟರು, ಜಮಾ ಖರ್ಚು ವಿವರಗಳನ್ನು ಕೋಶಾಧಿಕಾರಿ ಸಂತೋಷ್ ದರ್ಖಾಸ್ ನೀಡಿದರು. ನಂತರ 2023-24 ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿಯಾಗಿ ವಿನಯ್ ಎಂ.ಎಸ್, ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ಎಲ್ , ಜೊತೆ ಕಾರ್ಯದರ್ಶಿಯಾಗಿ ಸುಮನ್ ಪಡ್ಲಾಡಿ, ಜೊತೆ ಕೋಶಾಧಿಕಾರಿಯಾಗಿ ರಾಜೇಶ್ ಅಂಕಾಜೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸಪ್ಟೆಂಬರ್ 06 ರಂದು 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ  ಪ್ರಯುಕ್ತ ಪಡ್ಲಾಡಿ ಶಾಲಾ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಹಾಗೂ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ನಡೆಸುವ ಬಗ್ಗೆ ತೀರ್ಮಾನಿಸಿ  ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ  ಚರ್ಚಿಸಲಾಯಿತು.

ವಿನಯ್ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya
error: Content is protected !!