ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ದೊರಕಿದ್ದು, ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.


ಈಗಾಗಲೇ ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿಯಲ್ಲಿ ಗುರುತಿಸಿದ ಜಾಗದಲ್ಲಿ ಕಾರು ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬೆಳ್ತಂಗಡಿ, ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯಬೇಕಾಗಿದ್ದು, ಮುಂಡಾಜೆಯಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯಕ್ಕಾಗಿ ಹಳೇ ಸೇತುವೆಯ‌ನ್ನು‌ ತೆಗೆದು ಅದೇ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣವಾಗಬೇಕಾಗಿದೆ. ಮುಂಡಾಜೆಯಲ್ಲಿ ಇರುವುದು ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಸೇತುವೆ, ಈಗಲೂ ಬಹಳಷ್ಟು ಗಟ್ಟಿಯಾಗಿರುವ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.

Leave a Comment

error: Content is protected !!