ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕ ಮತ್ತು ಲಾಯಿಲ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೇಂದ್ರ ಸರಕಾರದ ಘೋಷಣೆಯಂತೆ ನನ್ನ ಮಣ್ಣು ನನ್ನ ದೇಶ ಆಚರಣೆ ಪಟ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
‘ವಸುಧ ವಂದನ್’ ಎಂಬ ಪರಿಕಲ್ಪನೆಯಂತೆ ಕೋಟಿ ವೃಕ್ಷ ಅಭಿಯಾನದ ನಿಮಿತ್ತ ಶಾಲಾ ಪರಿಸರದಲ್ಲಿ ಸುಮಾರು 50 ಗಿಡಗಳನ್ನು ನೆಡಲಾಯಿತು.
ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಕಾರ್ಯಕ್ರಮಾಧಿಕಾರಿ ಶಂಕರ ರಾವ್, ಬಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ.ಕೆ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಜೇಶ್ವರಿ, ಶಿಕ್ಷಕರಾದ ಯೋಗೀಶ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರೀತಾ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸೂರಪ್ಪ ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯರಾದ ಆಶಾಲತಾ ಪ್ರಶಾಂತ್, ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು.