ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯಲ್ಲಿ ನಡೆದಂತಹ ನಿಡ್ಲೆ, ಪೆರ್ಲ ಕೊಕ್ಕಡ ಕ್ಲಸ್ಟರಿನ ವಲಯ ಮಟ್ಟದ ಖೋ ಖೋ ಪಂದ್ಯಾಟ ದ ಸಮಾರೋಪ ಸಮಾರಂಭವನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯಶವಂತ ಗೌಡ ಮಾತನಾಡಿ ಕ್ರೀಡೆ ಎನ್ನುವುದು ವಿದ್ಯಾರ್ಥಿಗಳ ಜೀವನದಲ್ಲಿ ತುಂಬಾ ಮಹತ್ವವನ್ನು ಪಡೆಯುತ್ತದೆ, ಶಾಲೆಯ ಎಲ್ಲ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಗೆ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಬೇಕು ಎಂದು ಅಭಿಪ್ರಾಯ ಪಟ್ಟರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮಾತನಾಡಿ ವಿಜೇತರಾದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ನಡೆಯುವಂತಹ ತಾಲೂಕು ಮಟ್ಟದಲ್ಲಿಯು ಉತ್ತಮ ಪ್ರದರ್ಶನವನ್ನು ನೀಡಿ ತಾಲೂಕು ಮಟ್ಟದಲ್ಲಿಯೂ ಶಾಲೆಯ ಗೌರವವನ್ನು ಎತ್ತಿ ಹಿಡಿಯಬೇಕು ಎಂದು ತಿಳಿಸಿದರು. ,

ಈ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಶಾಲೆಯ ಮುಖ್ಯ ಶಿಕ್ಷಕರಾದ ಕೃಷ್ಣಪ್ಪ , ಕ್ರೀಡಾಕೂಟದಲ್ಲಿ ತೀರ್ಪುಗಾರರಾಗಿ ಕನ್ಯಾಡಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾರೀರಿಕ ಶಿಕ್ಷಕರಾದ ಮರಿಯಪ್ಪ ನೆಲ್ಯಡ್ಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಧರ್ , ಸೈಂಟ್ ಫ್ರಾನ್ಸಿಸ್ ಕೊಕ್ಕಡ ಶಾಲೆಯ ಶಾರೀರಿಕ ಶಿಕ್ಷಕ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಖೋ ಖೋ ಪಂದ್ಯಾಟಕ್ಕೆ ಸಹಕರಿಸಿದ ಎಲ್ಲರನ್ನೂ ಅಭಿನಂದಿಸಿ, ಶಾಲೆಯ ಎಲ್ಲ ವಿದ್ಯಾರ್ಥಿಗಳು ಇಂತಹ ಕ್ರೀಡಾಕೂಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ತಿಳಿಸಿದರು.


ವಲಯ ಮಟ್ಟದ ಖೋ ಖೋ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು, ದ್ವಿತೀಯ ಸ್ಥಾನವನ್ನು ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ ಕೊಕ್ಕಡ., ಬಾಲಕಿಯರ ವಿಭಾಗಲ್ಲಿಪ್ರಥಮ ಸ್ಥಾನವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು , ದ್ವಿತೀಯ ಸ್ಥಾನವನ್ನು ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ ಕೊಕ್ಕಡ. ಈ ವಿಜೇತ ತಂಡಗಳು ಮುಂಬರುವ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಲಿವೆ.


ಕ್ರೀಡಾಕೂಟದ ಬಹುಮಾನದ ಪ್ರಯೋಜಕರು ಪ್ರಥಮ ಸ್ಥಾನದ ಬಹುಮಾನವನ್ನು ಹಾಲು ಉತ್ಪಾದಕರ ಸಹಕಾರಿ ಸಂಘ ಬೊಳ್ಮನಾರ್. ದ್ವಿತೀಯ ಬಹುಮಾನದ ಪ್ರಾಯೋಜಕರು ಪುದುವೆಟ್ಟು ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಟಿಕ್ಕಾ ಸಾಹೇಬ್ ರವರು ಬಹುಮಾನ ವಿತರಿಸಿದರು.
ವಲಯ ಮಟ್ಟದ ಕ್ರೀಡಾಕೂಟಕ್ಕೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸಹಕರಿಸಿದ ಮೋಹನ ಗೌಡ ಅಡ್ಯ ಸಾಂತಪ್ಪ ಗೌಡ, ಎಲ್ಯಣ್ಣ ಗೌಡ ರವರನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರು ಅಭಿನಂದಿಸಿದರು.

ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಶೀಲಾ ಎನ್ ರವರು ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ ರವರು ಧನ್ಯವಾದಗೈದ ಕಾರ್ಯಕ್ರಮವನ್ನು, ನಿಶಾಂತ್ ಕುಮಾರ್ ರವರು ನಿರೂಪಿಸಿದರು.

Leave a Comment

error: Content is protected !!