ಬೆಳ್ತಂಗಡಿ: ನಾರಾವಿ ಅಳದಂಗಡಿ ಈ ಭಾಗದಿಂದ ತಾಲೂಕಿನ ಶಾಲಾ ಕಾಲೇಜಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದು ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಿ ಬಸ್ಸಿಗೆ ಮನವಿ ನೀಡಿದ್ದು ಇದಕ್ಕೆ ಸರಿಯಾಗಿ ಸರ್ಕಾರಿ ಬಸ್ಸಿನ ವ್ಯವಸ್ಥೆಗೆ ಅದೇಶ ಹೊರಡಿಸಿದ್ದು ಇದೀಗ ರಾಜ್ಯ ಸರ್ಕಾರ ಬಸ್ಸಿನ ತಡೆ ಹಿಡಿದಿರುವ ಕಾರಣ ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಪರಿಷತ್ ಇಂದು ಸರ್ಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆಯನ್ನು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.
ಹಲವಾರು ವರ್ಷಗಳ ಬೇಡಿಕೆಯಂತೆ ಕೆಎಸ್‌ಆರ್‌ಟಿಸಿ ಧರ್ಮಸ್ಥಳ – ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ನೀಡಿ, ಸಂಚಾರಕ್ಕೆ ಸಮಯವನ್ನೂ ನಿಗದಿ ಪಡಿಸಿದ ಪ್ರಕಟಣೆ ಹೊರಡಿಸಿತ್ತು. ಹೀಗಾಗಿ ಆ ಭಾಗದ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಇವತ್ತು ಏಕಾಏಕಿ ಬಸ್ ಸೇವೆ ಮುಂದೂಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಸ್ಥಳೀಯರು ಸೇರಿದಂತೆ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದ್ದು ರಾಜಕೀಯ ಉದ್ದೇಶದಿಂದ ಬಸ್ ತಡೆ ಹಿಡಿಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಸಂಚಾಲಕ ಸುವಿತ್ ಶೆಟ್ಟಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರಾದ ಸುಮಂತ್, ಶ್ರೇಯಸ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.