25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಹೆತ್ತವರ ನಿರಂತರ ಪ್ರಯತ್ನದಿಂದ ವಿದ್ಯಾರ್ಥಿಗಳು ಸ್ವತ: ಪರಿಶ್ರಮದಲ್ಲಿ ಮುಂದುವರಿವಂತಾಗಬೇಕು. ತಮ್ಮ ಮಕ್ಕಳನ್ನು ಗಮನಿಸಿ ತಾಳ್ಮೆ, ಸಹನೆಯಿಂದ ಹಿತವಚನವನ್ನು ಹೇಳಿ ಜೀವನದ ಸವಾಲುಗಳನ್ನು ಎದುರಿಸುವ ಬುದ್ಧಿವಂತರನ್ನಾಗಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಪರೀಕ್ಷಾ ವ್ಯವಸ್ಥೆಯಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಉಪನ್ಯಾಸಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಹೇಮಲತಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya
error: Content is protected !!