ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಇಂದಿನಿಂದ (ಆ.25) ಪ್ರಾರಂಭಗೊಳ್ಳುವ ಬಗ್ಗೆ ಕೆಎಸ್‌ಆರ್‌ಟಿಸಿ ಕಳೆದ ಎರಡು ದಿನಗಳ ಹಿಂದೆ ಪ್ರಕಟಣೆ ಹೊರಡಿಸಿತ್ತು. ಆದರೆ ಬಸ್ ಸಂಚಾರಕ್ಕೆ ತಡೆ ಒಡ್ಡಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಪರಿಷತ್ ಇಂದು ಸಂಜೆ 3 ಗಂಟೆಗೆ ಸರ್ಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆಯನ್ನು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.

ಹಲವಾರು ವರ್ಷಗಳ ಬೇಡಿಕೆಯಂತೆ ಕೆಎಸ್‌ಆರ್‌ಟಿಸಿ ಧರ್ಮಸ್ಥಳ – ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ನೀಡಿ, ಸಂಚಾರಕ್ಕೆ ಸಮಯವನ್ನೂ ನಿಗದಿ ಪಡಿಸಿದ ಪ್ರಕಟಣೆ ಹೊರಡಿಸಿತ್ತು. ಹೀಗಾಗಿ ಆ ಭಾಗದ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಇವತ್ತು ಏಕಾಏಕಿ ಬಸ್ ಸೇವೆ ಮುಂದೂಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಸ್ಥಳೀಯರು ಸೇರಿದಂತೆ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದ್ದು ರಾಜಕೀಯ ಉದ್ದೇಶದಿಂದ ಬಸ್ ತಡೆ ಹಿಡಿಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

Leave a Comment

error: Content is protected !!