April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಡೆಯಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಯುವ ಕಲಾವಿದ ಚಂದ್ರಹಾಸ ಬಳಂಜ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಅಂಶಗಳನ್ನು ತಿಳಿಸಿದರು.

ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಹಾಗೂ ತಾಲೂಕು ಮಟ್ಟದ ಗೀತಗಾಯನ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಉಪಸ್ಥಿತರಿದ್ದರು.

ರೋವರ್ಸ್ ವಿಭಾಗದ ಆರ್.ಎಸ್.ಎಲ್ ಬೆಳಿಯಪ್ಪ ಕೆ ಸ್ವಾಗತಿಸಿ ರೇಂಜರ್ಸ್ ವಿಭಾಗದ ಆರ್.ಎಲ್ ರಕ್ಷಾ ಧನ್ಯವಾದವಿತ್ತರು. ರೇಂಜರ್ ಸುಜನ್ಯಾ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!