April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

ತೆಕ್ಕಾರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ ದುಷ್ಕರ್ಮಿಗಳ ತಂಡ ಯುವಕನಿಗೆ ಥಳಿಸಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ
ಘಟನೆ ಸಂಭವಿಸಿದೆ.

ಹಲ್ಲೆಗೊಳಗಾದ ಯುವಕನನ್ನು ಮುಝಮ್ಮಿಲ್ (19) ಎಂಡೋಸಲ್ಫಾನ್ ಪೀಡಿತ ಸಂತ್ರಸ್ತನಾಗಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವವನಾಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯನ್ನು ಆತನ ತಾಯಿ ಮೈಮುನ (38) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಐದು ಮಂದಿ ದುಷ್ಕರ್ಮಿಗಳ ಗುಂಪು ಒಂಟಿ ಮಹಿಳೆ ಹಾಗೂ ಎಂಡೋಸಲ್ಫಾನ್ ಪೀಡಿತ ಮಗ ವಾಸವಿರುವ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಸಂದರ್ಭದಲ್ಲಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಗ ಬೊಬ್ಬೆಹಾಕಿ ಅಡ್ಡ ಬಂದಾಗ ಮಗನಿಗೂ ಮನಬಂದಂತೆ ಥಳಿಸಿದ್ದರು ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಹಾಗೂ ಹಲ್ಲೆಗೊಳಗಾದ ಮಗ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!