24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಸೆಂಟ್ರಲ್ ಸ್ಟೆರೈಲ್ ಸಪ್ಲೈ ಡಿಪಾರ್ಟ್‌ಮೆಂಟ್‌ನಲ್ಲಿ 125 ಲೀಟರ್ ಸಾಮರ್ಥ್ಯದ 6 ಲಕ್ಷ ರೂಪಾಯಿ ಮೌಲ್ಯದ ಅತ್ಯಂತ ಪರಿಣಾಮಕಾರಿ ಹೊಸ ಎಥಿಲೀನ್ ಆಕ್ಸೈಡ್ ಯಂತ್ರವನ್ನು ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಹೇಳಿದರು.


ಈ ಯಂತ್ರವು ಕಡಿಮೆ ತಾಪಮಾನದ ಅನಿಲ ಪ್ರಕ್ರಿಯೆಯಾಗಿದ್ದು, ಏಕಬಳಕೆಯ ವೈದ್ಯಕೀಯ ಸಾಧನಗಳ ಕ್ರಿಮಿನಾಶಕಗೊಳಿಸಲು ಇದನ್ನು ಬಳಸಲಾಗುತ್ತದೆ. ಕಡಿಮೆ ಸಮಯದಲ್ಲಿ ಕಡಿಮೆ ತಾಪಮಾನದಲ್ಲಿ ಅತ್ಯಂತ ಸುರಕ್ಷಿತವಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ.

ವೈದ್ಯಕೀಯ ಸಲಕರಣೆಗಳನ್ನು ಮರುಬಳಕೆ ಮಾಡಲು ಸಾಧ್ಯವಾಗುವುದರಿಂದ ರೋಗಿಗಳಿಗೆ ಮಿತದರದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ. ರೋಗಿಗಳ ಹಿತದೃಷ್ಟಿಯಿಂದ ಈ ಹೊಸ ಇಟಿಓ ಯಂತ್ರ ಅಳವಡಿಸಲಾಗಿದೆ ಎಂದು ಅವರು ತಿಳಿಸಿದರು.

Related posts

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಎಸ್.ಡಿ.ಎಂ ಕಾಲೇಜು : ವಿದ್ಯಾರ್ಥಿ ತಯಾರಿಕೆಯ 30ಕ್ಕೂ ಅಧಿಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!