ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಹೆತ್ತವರ ನಿರಂತರ ಪ್ರಯತ್ನದಿಂದ ವಿದ್ಯಾರ್ಥಿಗಳು ಸ್ವತ: ಪರಿಶ್ರಮದಲ್ಲಿ ಮುಂದುವರಿವಂತಾಗಬೇಕು. ತಮ್ಮ ಮಕ್ಕಳನ್ನು ಗಮನಿಸಿ ತಾಳ್ಮೆ, ಸಹನೆಯಿಂದ ಹಿತವಚನವನ್ನು ಹೇಳಿ ಜೀವನದ ಸವಾಲುಗಳನ್ನು ಎದುರಿಸುವ ಬುದ್ಧಿವಂತರನ್ನಾಗಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಪರೀಕ್ಷಾ ವ್ಯವಸ್ಥೆಯಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ನೀಡಿದರು.
ಉಪನ್ಯಾಸಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಹೇಮಲತಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.