ಉಜಿರೆ : ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಇದರ ಆಶ್ರಯದಲ್ಲಿ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ 26 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಶಿಬಿರವನ್ನು ಉಜಿರೆಯ ಯಸ್ ಡಿ ಯಂ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧಿಕಾರಿ ಜನಾರ್ಧನ್ ಅವರು ಉದ್ಘಾಟಿಸಿ ಶುಭಹಾರೈಸಿದರು, ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, , ಎನ್ ಯಸ್ ಯಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಒಟ್ಟು 107 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.