24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ. 26 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಪೆರ್ನಾಂಡೀಸ್ ವಹಿಸಿದ್ದರು.

ವೇದಿಕೆಯಲ್ಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ನರೇಂದ್ರ ಕುಮಾರ್, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ‌ಕುಮಾರ್ ಕೆ.ವೈ, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ,ಉಮೇಶ, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸಂದೇಶ ಉಪಸ್ಥಿತರಿದ್ದರು.

ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು ಸಿಎ ಬ್ಯಾಂಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪಡಂಗಡಿ ಗ್ರಾ.ಪಂ ನೂತನ ಅಧ್ಯಕ್ಷ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷೆ ವಸಂತಿ,ನಿವೃತ್ತ ಅಂಚೆ ಪಾಲಕ ಪೂವಪ್ಪ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಹಾಗೂ ಉತ್ತಮ ಅಂಕಗಳಿಸಿದ ಸ್ಥಳೀಯ ಶಾಲಾ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೂ ಸ್ಥಳೀಯ ಶಾಲೆಯ ಗ್ರಂಥಾಲಯದ ಪುಸ್ತಕ ಜೋಡನೆಗೆ ಸಹಕಾರ ನೀಡಿದರು.

ಪಡಂಗಡಿ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ ವಾರ್ಷಿಕ ವರದಿಯನ್ನು ಸಭೆಯ ಮುಂದಿಟ್ಟರು. ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ಸರ್ವ ಸದಸ್ಯರು ಸಹಕರಿಸಿದರು. ಶಿಕ್ಷಕ ಶಿವಶಂಕರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿಗಳಾದ ಸುಜಯ, ಉಮೇಶ್, ಆನಂದ, ರಂಜಿತ್ ಸಹಕರಿಸಿದರು. ನಿರ್ದೇಶಕ ರವಿಕುಮಾರ್ ಕೆ.ವೈ ವಂದಿಸಿದರು.

ಚಿತ್ರ: ನರ್ಮದ ಸ್ಟುಡಿಯೋ ವೇಣೂರು

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
error: Content is protected !!