April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಸೇರಿದಂತೆ ವಿವಿಧೆಡೆ ಇತ್ತಿಚೇಗೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50ವ) ಬಂಧಿತ ಆರೋಪಿಯಾಗಿದ್ದಾನೆ.
ಈತ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿಯೊಂದನ್ನು ಕಳ್ಳತನಗೈದು ಅದರಲ್ಲಿ ಸುತ್ತಾಡುತ್ತಾ ಒಬ್ಬಂಟಿಯಾಗಿ ರಾತ್ರಿವೇಳೆ ಹಲವೆಡೆ ಕಳ್ಳತನ ಕೃತ್ಯವೆಸಗುತ್ತಿದ್ದನೆಂದು ತನಿಖೆಯಿಂದ ದೃಢಪಟ್ಟಿದೆ. ಇದೇ ಆ.9 ರಂದು ಸೋಮಂತಡ್ಕ ಪೇಟೆಯ ಪ್ರಸನ್ನ ಪ್ರಾವಿಜನ್ ಸ್ಟೋರ್‌ನ ಬಾಗಿಲು ಮುರಿದು ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ ನಗದು ಕಳ್ಳತನ ಗೈದಿರುವ ಬಗ್ಗೆ ಮಾಲಕ ಪ್ರಸನ್ನ ಆರಿಗ ಅವರು ಠಾಣೆಗೆ ನೀಡಿದ್ದರು.


ಧರ್ಮಸ್ಥಳ ಎಸ್.ಐ ಅನಿಲ್‌ಕುಮಾರ್ ಡಿ, ಸಮರ್ಥ ಗಾಣಿಗೇರ್, ಲೋಲಾಕ್ಷ ಪಿ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸ್ಯಾಮುವೆಲ್, ರಾಜೇಶ್, ಪ್ರಶಾಂತ, ಶೇಖರ್, ಸತೀಶ ನಾಯ್ಕ ಜಿ, ಶಶಿಧರ, ಮಂಜುನಾಥ, ಧರ್ಮಪಾಲ್, ಅಸ್ಲಾಂ, ಕೃಷ್ಣಪ್ಪ, ಪ್ರಮೋದಿನಿ, ಮಲ್ಲಿಕಾರ್ಜುನ, ಅಭಿಜಿತ್, ಮೆಹಬೂಬ್, ನಾಗರಾಜ ಬುಡ್ರಿ, ದೀಪು, ಮಧು, ಹರೀಶ್, ಜಗದೀಶ್ ಇವರುಗಳನ್ನೊಳಗೊಂಡ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.


ಆರೋಪಿಯ ವಿರುದ್ದ ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ, ಹಿರಿಯಡಕ, ಪಡುಬಿದ್ರಿ, ಮುಲ್ಕಿ, ಹೆಬ್ರಿ, ಉಡುಪಿ ನಗರ, ದಾವಣಗೆರೆ ಗ್ರಾಮಾಂತರ ಮತ್ತು ಬೆಳಗಾಂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಬಂಧಿತನಿಂದ 20,220 ರೂ. ನಗದು, ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಅದರ ಮೌಲ್ಯ 25ಸಾವಿರ ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಕೃತ್ಯ ಸ್ಥಳಗೈದ ಸ್ಥಳಗಳಿಗೆ ಕರೆದೊಯ್ದು ಮಹಜರು ನಡೆಸಲಾಗಿದೆ.

Related posts

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!