37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27 ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಲಿದೆ.

ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ನೂತನ ಲಿಪ್ಟ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ನೆರವೇರಿಸಲಿದ್ದಾರೆ.

ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಹಾಗೂ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!