September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ವರ್ಷ೦ಪ್ರತಿಯಂತೆ ಜರಗುವ ಈ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ಶಾರದಾ ಕಲಾ ಮಂಟಪ ಶಾರದಾ ನಗರ ಗುರುವಾಯನಕೆರೆಯಲ್ಲಿ ಜರುಗಿತು.


ಕುತ್ಯಾರು ದಯಾಕರ್ ಭಟ್ ಇವರ ಪೌರೋಹಿತ್ಯದಲ್ಲಿ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರುಗಿತು.

ಸಂಜೆ 6ರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ದಯಾಕರ್ ಭಟ್ ಇವರು ವರಮಹಾಲಕ್ಷ್ಮೀ ಪೂಜೆಯ ಮಹತ್ವದ ಬಗ್ಗೆ ಸವಿವರಾಗಿ ತಿಳಿಸಿದರು. ನಂತರ ರಕ್ಷಾ ಬಂಧನ, ಹಾಗೂ ಮಹಾ ಪೂಜೆ, ನಂತರ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಕಾರ್ಯಕ್ರಮದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತಾದಿಗಳು ಭಾಗವಹಿಸಿದ್ದರು. ಸುಧಾಮಣಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!