22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು.

ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು. ನೂತನ ಲಿಪ್ಟ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ನೆರವೇರಿಸಿ ಶುಭಕೋರಿದರು.

ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ,ಬ್ಯಾಂಕಿನ ನಿರ್ದೇಶಕ ಹಿರಿಯರಾದ ನಿರಂಜನ್ ಬಾವಂತಬೆಟ್ಟು,ಕೆಎಂಎಫ್ ಉಪಾಧ್ಯಕ್ಷ ಎಸ್.ಬಿ ಜಯರಾಮ್,ಕೆಂದ್ರ ಬ್ಯಾಂಕಿನ ನಿರ್ದೇಶಕ ಹರೀಶಚ್ಚಂದ್ರ,ಹಾಗೂ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.

ದ‌ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರುಗಳು,ಬ್ಯಾಂಕಿನ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು,ತಾಲೂಕಿನ ಸಹಕಾರಿ ಸಂಘದ ಅಧ್ಯಕ್ಷರ,ನಿರ್ದೇಶಕರುಗಳು,ನೌಕರರ ವೃಂದದವರು,ನವೋದಯ ಸಂಘದ ಪದಾಧಿಕಾರಿಗಳು .

ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿವೃತ ಸಿಇಓ ನಿತ್ಯಾನಂದ ಶೆಟ್ಟಿ ಪಿ.ಹೆಚ್ ಕಾರ್ಯಕ್ರಮ ನಿರೂಪಿಸಿದರು.ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಲಕೃಷ್ಣ ಭಟ್ ಧನ್ಯವಾದ ಸಮರ್ಪಿಸಿದರು.

Related posts

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya
error: Content is protected !!