March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

ನಿಡ್ಲೆ: ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಹೊಸ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಆ.28 ರಂದು ನಿಡ್ಲೆ ಬರೆಂಗಾಯದ ಅಗ್ರಿ ಲೀಫ್ ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಿ ಸಚಿವರಾದ ಶರಣಬಸಪ್ಪ ದರ್ಶನಾಪುರರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹಷೇಂದ್ರ ಕುಮಾರ್‌, ಗೌರವಾನ್ವಿತ ಅತಿಥಿಗಳಾಗಿ ಮಾಜಿ ಶಾಸಕರು, ವಿಧಾನ ಪರಿಷತ್‌ ಹಾಗೂ ಎಸ್.ಯು.ಸಿ.ಒ ಬ್ಯಾಂಕ್ ಲಿ. ಅಧ್ಯಕ್ಷ ಮನೋಹರ ಮಸ್ಕಿ, ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್, ಶಶಿ ಕ್ಯಾಟರಿಂಗ್ ಸರ್ವಿಸ್ ನ ನಿರ್ದೇಶಕರು ಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶಶಿಧರ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗ್ರಿಲಿಫ್ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಅವಿನಾಶ್ ರಾವ್, ಸಂಸ್ಥಾಪಕ ಅತಿಶಯ ಜೈನ್, ನಿರ್ದೇಶಕರಾದ ರಾಗ್ನಿಸ್, ಉಪಸ್ಥಿತರಿದ್ದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya
error: Content is protected !!