25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

ಬೆಳ್ತಂಗಡಿ: ನಿಡ್ಲೆ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಳಾದ ಸತೀಶ್ ಕೆ ಬಂಗೇರ ಕಾಶಿಪಟ್ಟ ಮತ್ತು ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ ಗೌರವಿಸಿದರು. ನಂತರ ಸಚಿವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆ ಗಳನ್ನು ಸರ್ಕಾರ ಜಾರಿ ಮಾಡುತ್ತದೆ ಎಂದರು. ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ದ.ಕ ಜಿಲ್ಲಾ ಎಸ್ ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ. ಈಶ್ವರ ಭಟ್, ಪದ್ಮನಾಭ ಸಾಲಿಯಾನ್, ಸಂದೀಪ್ ನೀರಲ್ಕೆ, ಬೊಮ್ಮಣ್ಣ ಗೌಡ ಪುದುವೆಟ್ಟು ಮತ್ತು ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!