April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

ಕೊಕ್ಕಡ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಕೊಕ್ಕಡ ನಿವಾಸಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ ಯಿಂದ ಮಂಗಳೂರಿಗೆ ತೆರಳುತ್ತಿರುವ ಅಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Related posts

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!