ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ , , ಬೆಂಗಳೂರು ಇವರ ಸಹಯೋಗದಲ್ಲಿ6 ದಿನಗಳ ಸೋಲಾರ್ ತರಬೇತಿ ಶಿಬಿರವು ಪ್ರಾರಂಭವಾಗಿದೆ. ಸೆಲ್ಕೋ ಸೋಲಾರ್‌ನ ಸಂಚಿತ್ ರೈ ಏರಿಯಾ ಮೆನೇಜರ್, ಸೆಲ್ಕೋ ಪ್ರೈವೇಟ್ ಲಿಮಿಟೆಡ್ ಇವರು ದೀಪ ಬೆಳಗಿಸುವುದರ ಮುಖೇನ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು.

ಭಾರತೀಯ ವಿಕಾಸ ಟ್ರಸ್ಟ್ ಉಡುಪಿಯ ಜೀವನ್, ಪ್ರೋಗ್ರಾಮ್ ಮ್ಯಾನೇಜರ್ ಭಾರತೀಯ ವಿಕಾಸ ಟ್ರಸ್ಟ್ ಇವರು ಕಾರ್ಯಕ್ರಮದ ರೂಪರೇಷೆಗಳನ್ನು ತಿಳಿಸಿ ಸೋಲಾರ್ ವಿದ್ಯುತ್ ಉಪಕರಣಗಳ ಇಂದಿನ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಇವರು ಪ್ರಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ತರಬೇತಿ ಅಧಿಕಾರಿ ಪೀಟರ್ ಸಿಕ್ವೇರಾ ಉಪಸ್ಥಿತರಿದ್ದರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಬಿ. ಇವರು ಕಾರ್ಯಕ್ರಮ ಆಯೋಜಿಸಿ ನಿರ್ವಹಿಸಿದರು. ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಉಡುಪ ವಂದಿಸಿದರು.

ಆರು ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಪ್ರಾಯೋಗಿಕ ತರಬೇತಿಯೊಂದಿಗೆ ಸೋಲಾರ್ ಲೈಟ್, ವಾಟರ್ ಹೀಟರ್ ಮುಂತಾದವುಗಳ ಅಳವಡಿಕೆ ದುರಸ್ತಿ ತರಬೇತಿ ನೀಡಲಾಗುತ್ತದೆ

Leave a Comment

error: Content is protected !!