23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಲಿದೆ.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರ ಶರತ್‌ಕೃಷ್ಣ ಪಡ್ವೆಟ್ನಾಯ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ.

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್ ನಿರಖು ಠೇವಣಿ ಪತ್ರವನ್ನು ಬಿಡುಗಡೆಗೊಳಿಸಲಿದ್ದಾರೆ. ಭದ್ರತಾ ಕೊಠಡಿ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ ನಿರ್ದೇಶಕ ಮಂಜುನಾಥ ಎಸ್.ಕೆ., ಗಣಕಯಂತ್ರ ಉದ್ಘಾಟನೆಯನ್ನು ಕಾಯರ್ತ್ತಡ್ಕ ಸೈಂಟ್ ಸೆಬೆಸ್ಟಿಯನ್ ಚರ್ಚ್‌ನ ಧರ್ಮಗುರು ವಂ| ಫಾ. ಜೋಸೆಫ್ ವಾಲುಕಾರನ್ ನೆರವೇರಿಸಲಿದ್ದಾರೆ.

ಕಾಯರ್ತ್ತಡ್ಕ ಎಂ.ಜೆ.ಎಂ. ಧರ್ಮಗುರು ಮಹಮ್ಮದ್ ಹನೀಫ್ ಮದನಿ, ಕ.ರಾ.ಸೌ.ಸಂ.ಸ.ನಿ. ಜಿಲ್ಲಾ ಸಂಯೋಜಕ ವಿಜಯ್ ಬಿ.ಎಸ್., ನಿಡ್ಲೆ ಗ್ರಾ.ಪಂ. ಅಧ್ಯಕ್ಷ ಶ್ಯಾಮಲ, ನಿಡ್ಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಕೆ. ಭದ್ರಯ್ಯ ಗೌಡ ಭಾಗವಹಿಸಲಿದ್ದಾರೆ ಎಂದು ಬ್ಯಾಂಕಿನ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು,ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ‌

Related posts

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya
error: Content is protected !!