30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆ.28 ರಂದು ನೆರವೇರಿತು.

ಮಂಗಳೂರು ಪ್ರಾಂತ್ಯದ ವೈಸಿಎಸ್, ವೈಎಸ್ಎಮ್ ನ ನಿರ್ದೇಶಕರಾದ ವಂ.ಫಾ| ರೋಶನ್ ಡಿಕುನ್ಹಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ಪರ್ಧಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಆಡಬೇಕೆಂದು ನುಡಿದು ಶುಭಹಾರೈಸಿದರು.

ಶಾಲಾ ಸಂಚಾಲಕರಾದ ಅತೀ ವಂ. ಫಾ| ವಾಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿ ಆಶೀರ್ವದಿಸಿದರು. ಬೆಳ್ತಂಗಡಿ ನೋಡೆಲ್ ಅಧಿಕಾರಿ ಪಂಚಾಕ್ಷರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಳ್ತಂಗಡಿ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀಮತಿ ವಾರಿಜಾ ಪಂದ್ಯಾಟಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋ, ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.

ಒಟ್ಟು ಬಾಲಕರು 9 ತಂಡಗಳು ಹಾಗೂ ಬಾಲಕಿಯರ 7 ತಂಡ ಹಾಗೂ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.

ಸಹಶಿಕ್ಷಕಿಯರಾದ ಶ್ರೀಮತಿ ಪಲ್ಲವಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶರತ್ ಪಿಂಟೋ ವಂದಿಸಿ, ಶ್ರೀಮತಿ ಎಲ್ವಿಟಾ ಪಾಯ್ಸ್ ಕಾರ್ಯಕ್ರಮ ನಿರ್ವಹಿಸಿದರು.

ಬಾಲಕರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ, ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ ಹಾಗೂ ಚರ್ಚ್ ಅನುದಾನಿತ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ದಿನದ ಎಲ್ಲಾ ಬಹುಮಾನಗಳ ಪ್ರಾಯೋಜಕತ್ವವನ್ನು ಲೋಬೋ ಇಂಡಸ್ಟ್ರೀಸ್, ಕೆಮ್ಮಟ್ಯಾರ್ ರೇಷ್ಮೆ ರೋಡ್ ರವರು ನೀಡಿ ಸಹಕರಿಸಿರುತ್ತಾರೆ.

Related posts

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya
error: Content is protected !!