23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಆ.31 ರಂದು ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ಜರುಗಲಿದೆ

ಶ್ರೀ ಗು.ನಾ.ಸ್ವಾ.ಸೇ. ಸಂಘದ ಗೌರವಾಧ್ಯಕ್ಷರು, ಮಾಜಿ ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮೂಡಬಿದಿರೆ ಶಾಸಕ ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಪ್ರಭಾಕರ್ ಬಂಗೇರ, ಬೆಷ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭಾಗವಹಿಸಲಿದ್ದಾರೆ.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸಂಘದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಧಕರಿಗೆ ಸನ್ಮಾನ:
ಸಮಾಜದ ಸಾಧಕರಾದ ಡಾ| ಬಿ.ಸಿ. ರಾಯ್ ರಾಜ್ಯ ಸರಕಾರದ ಪ್ರಶಸ್ತಿ ವಿಜೇತರಾದ ಡಾ| ಸದಾನಂದ ಪೂಜಾರಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್, ಲೋಕೋಪಯೋಗಿ ಇಲಾಖೆ ಕಿರಿಯ ಅಭಿಯಂತರರಾದ ಸೂರಜ್ ಹೆಚ್.ಹಾನಿಂಜ, ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಕು| ನಿರೀಕ್ಷಾ ನಾವರ, ರಾಷ್ಟ್ರಮಟ್ಟದ ಡಿಸ್ಕಸ್ ಥ್ರೋ ಆಟಗಾರ್ತಿ ಕು| ಸುಷ್ಮಾ ಬಿ. ಪೂಜಾರಿ ಇವರುಗಳನ್ನು ಸನ್ಮಾನಿಸಲಿದ್ದಾರೆ.

Related posts

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!