April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು ಮೈದಾನದಲ್ಲಿ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಸಚಿವರು  ಚಾಲನೆ ನೀಡುವ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಮಿನಿ ವಿಧಾನಸೌಧ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ, ಹಾಗೂ ಕೆಲ್ಲಗುತ್ತು ಸಮುದಾಯ ಭವನದಲ್ಲಿ ಎಲ್ ಇ ಡಿ ಪರದೆ  ಮೇಲೆ ಬಿತ್ತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ ಟಿ ಸುರೇಶ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಿಡಿಪಿಒ ಪ್ರೀಯ ಆಗ್ನೇಸ್, ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ಸದಸ್ಯರಾದ ಜಗದೀಶ್ ಉಪಸ್ಥಿತರಿದ್ದರು.

ಯೋಜನೆಯ ಉದ್ಘಾಟನಾ ಕಾರ್ಯಕ್ರಮ  ಹಾಗು ಸಚಿವರ ಭಾಷಣವನ್ನು ನೇರ ಪ್ರಸಾರದಲ್ಲಿ ಬಿತ್ತರಿಸಲಾಯಿತು.

ಬೆಳ್ತಂಗಡಿ ನಗರದ ಸಹಸ್ರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ  ನಗದು ವರ್ಗಾವಣೆಗೊಂಡ ಬಗೆಗೆ  ಅವರವರ ಮೊಬೈಲ್ ಗೆ ಸಂದೇಶ ರವಾನೆಯಾಗಲಿದೆಯೆಂದು  ತಿಳಿಸಲಾಯಿತು. 

Related posts

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!