ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿತು.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯರವರು ನೂತನ ಶಾಖೆಯನ್ನು ಉದ್ಘಾಟಿಸಿ ಶುಭಕೋರಿದರು.
ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್ ನಿರಖು ಠೇವಣಿ ಪತ್ರವನ್ನು ಬಿಡುಗಡೆಗೊಳಿಸಿದರು. ಗಣಕಯಂತ್ರದ ಉದ್ಘಾಟನೆಯನ್ನು ಕಾಯರ್ತ್ತಡ್ಕ ಸೈಂಟ್ ಸೆಬೆಸ್ಟಿಯನ್ ಚರ್ಚ್‌ನ ಧರ್ಮಗುರು ವಂ| ಫಾ. ಜೋಸೆಫ್ ವಾಲುಕಾರನ್ ನೆರವೇರಿಸಿದರು.

ವೇದಿಕೆಯಲ್ಲಿ ಕಾಯರ್ತ್ತಡ್ಕ ಎಂ.ಜೆ.ಎಂ. ಧರ್ಮಗುರು ಮಹಮ್ಮದ್ ಹನೀಫ್ ಮದನಿ, ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು,ಕ.ರಾ.ಸೌ.ಸಂ.ಸ.ನಿ ಜಿಲ್ಲಾ ಸಂಯೋಜಕ ವಿಜಯ್ ಬಿ.ಎಸ್., ನಿಡ್ಲೆ ಗ್ರಾ.ಪಂ. ಅಧ್ಯಕ್ಷ ಶ್ಯಾಮಲ, ನಿಡ್ಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಕೆ. ಭದ್ರಯ್ಯ ಗೌಡ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಉಮೇಶ್ ಎಬಿ, ಬಿಎಂ ಅಬ್ದುಲ್ ಹಮೀದ್, ಬಿ.ರಾಜಶೇಖರ ಅಜ್ರಿ,ಕೆ.ಎಸ್ ಯೋಗೀಶ್ ಕುಮಾರ್,ಶೈಲೇಶ್ ಕುಮಾರ್, ವಿ.ರಮೇಶ್ ಪೂಜಾರಿ, ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಶ್ರೀಮತಿ ಉಷಾ ಶರತ್, ಶ್ರೀಮತಿ ಜೆಸಿಂತಾ ಮೋನಿಸ್, ರಾಗ್ನೀಶ್, ಅಭಿನಂದನ್ ಹರೀಶ್ ಕುಮಾರ್, ಬ್ಯಾಂಕಿನ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.
ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಕೆ.ರಾಮಚಂದ್ರ ಗೌಡ ಸ್ವಾಗತಿಸಿದರು. ರಶ್ಮಿತಾ, ಚೈತ್ರಾ, ಪವಿತ್ರಾ ಪ್ರಾರ್ಥನೆಗೈದರು.ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.