ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು.
ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಲ್ಯಾಬ್ ಪರೀಕ್ಷಾ ವಿಧಾನ ಇದೀಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ದೊರೆಯಲಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿಟಿ ಸ್ಕ್ಯಾನ್, ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.