35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಪ್ರವೀಣ್ ರೈ.ಪಿ ಹಾಗೂ ಉಪಾಧ್ಯಕ್ಷರಾಗಿ ಶಿವರಾಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಆ.31ರಂದು ಸಂಘದ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಪುತ್ತೂರು ಸಹಾಯಕ ಉಪನಿಬಂಧಕರ ಕಚೇರಿಯ ಅಧಿಕಾರಿ ಶಿವಲಿಂಗಯ್ಯ ಭಾಗವಹಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.


ಇದುವರಿಗೆ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಎನ್ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಿ. ಸೇವೆ ಸಲ್ಲಿಸುತ್ತಿದ್ದು, ಎರಡುವರೆ ವರ್ಷ ಅವಧಿ ಮುಗಿದಿರುವುದರಿಂದ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರವೀಣ್ ರೈ ಪಿ. ಅವರು ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಚುನಾವಣೆ ಸಂದರ್ಭ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ. ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya
error: Content is protected !!