30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

ಉಜಿರೆ :ವಿದ್ಯೆಯಿಂದ ಸ್ವತಂತ್ರರಾಗಿರಿ ಅನ್ನುವ ದೇವ ವಾಕ್ಯದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವತಿಯಿಂದ ನೆನಪಿನಂಗಳ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ ಪಿ ಅಂತೋನಿ ಇವರು ಮುಖ್ಯ ಅತಿಥಿಗಳಾಗಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಯೋಚಿತ ಹಿತ ನುಡಿಗಳನ್ನು ನೀಡಿದರು.

ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ಹಿರಿಯ ವಿದ್ಯಾರ್ಥಿಗಳು ನಡೆದು ಬಂದ ದಾರಿ ಹಾಗೂ ನೆನಪಿನ ಅಂಗಳ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಜೊತೆ ಕಾರ್ಯದರ್ಶಿ ಶ್ರೀ ಕೆವಿ ಶ್ರೀಧರ್ ಅವರು ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿವೇತನವನ್ನು ನೀಡಿದರು.

ಸಂಯೋಜಕ ಡಾ ಎಂಪಿ ಶ್ರೀನಾಥ್ ರವರು ಸ್ವಾಗತಿಸಿದರು. ಅಭಿಲಾಶ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya
error: Content is protected !!