September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು.


ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಲ್ಯಾಬ್ ಪರೀಕ್ಷಾ ವಿಧಾನ ಇದೀಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ದೊರೆಯಲಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿಟಿ ಸ್ಕ್ಯಾನ್, ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya
error: Content is protected !!