ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕುಕ್ಕೇಡಿ: ಗ್ರಾಮ ಪಂಚಾಯತ್ ವತಿಯಿಂದ, ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/- ಗಳನ್ನು ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ವು ಜಾರಿಗೆ ತಂದಿದ್ದು, ಆ 30 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಕುಕ್ಕೇಡಿ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಗೃಹ ಲಕ್ಷ್ಮಿ ಮಂಜೂರಾತಿ ಪತ್ರವನ್ನು ನೀಡುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Comment

error: Content is protected !!