April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು) ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ ಹಾಗೆಯೇ ಇನ್ನೋರ್ವ ಶಿಕ್ಷಕರಾದ ಶಶಿಕಾಂತ್ (ವಿಜ್ಞಾನ ಶಿಕ್ಷಕರು) ರವರು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ.

ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ಎಸ್ ಡಿ ಎಂ ಸಿ, ಪೋಷಕ ವೃಂದ ಮತ್ತು ಶಾಲಾ ವತಿಯಿಂದ ಬೀಳ್ಕೊಡುಗೆ ಸಮಾರಂಭ ಅರಸಿನಮಕ್ಕಿ ಪ್ರೌಢಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ತನಿಯಪ್ಪ ಗೌಡರು ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರ ಹಾಗೂ ಎಸ್ ಡಿ ಎಂ ಸಿ ಸದಸ್ಯರು ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಟ್ಟರು.


ಕಾರ್ಯಕ್ರಮವನ್ನು ಶ್ರೀಮತಿ ಸೇವ್ರಿನ್ ಮಾರ್ಟಿಸ್ ನಿರೂಪಿಸಿ, ಶ್ರೀಮತಿ ಮೀನಾಕ್ಷಿ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು.

Related posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!