September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕೊಕ್ಕಡ :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಕೊಕ್ಕಡದ ಸಂತ ಫ್ರಾನ್ಸಿಸ್ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು.


ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂತ ಫ್ರಾನ್ಸಿಸ್ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಬ್ರದರ್ ಜೋಸೆಫ್, ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ, ಸಿ ಆರ್ ಪಿ ವಿಲ್ಫ್ರೆಡ್ ಪಿಂಟೋ, ರಕ್ಷಕ ಶಿಕ್ಷಕ ಸಂಘದ ಜಯೇಶ್ ಪ್ರಿನ್ಸಿಪಾಲ್, ವಂದನಿಯ ಫಾ. ರೊಯ್ ಕಪ್ಪುಚಿನ್, ಫಾ ಅರುಣ್. ಫಾ. ಬಿಪಿನ್, ಮುಖ್ಯೋಪಾಧ್ಯಾಯಿನಿ ವಂ. ಸಿ| ಚೈತನ್ಯ ಮೊದಲಾದವರು ಉಪಸ್ಥಿತರಿದ್ದರು.

ಸುಮಾರು 18 ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

Related posts

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ಸಂಘದ ಸದಸ್ಯರಿಗೆ ಶೇ. 13 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!