37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ 2023-24ನೇ ಸಾಲಿನಲ್ಲಿ ರಾಜ್ಯದ 15,000 ಹೆಕ್ಟೇರ್ ಪ್ರದೇಶದಲ್ಲಿ ಅನುಷ್ಠಾನಿಸಲಿರುವ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮವು ಸೆ.1 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮವನ್ನು ನಬಾರ್ಡ್ ಮುಖ್ಯ ಮಹಾಪ್ರಬಂಧಕ ಟಿ ರಮೇಶ್ ಉದ್ಘಾಟಿಸಿ, ರೈತರಿಗೆ ಸಂದೇಶವನ್ನು ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್ ಆಶಯ ಭಾಷಣವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.ರೈತರಿಗೆ ನರ್ಸರಿ ಟ್ರೇ ಯನ್ನು ವಿತರಿಸಲಾಯಿತು.

ಕೇಂದ್ರೀಕೃತ ಭತ್ತದ ನರ್ಸರಿ ಮಾಡಿದ ರೈತರಿಗೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಹೆಚ್ ಕೆಂಪೇಗೌಡ ರವರು ಸನ್ಮಾನಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ ಇವರು ಯಾಂತ್ರೀಕೃತ ಭತ್ತ ಬೇಸಾಯದ ಮಾಹಿತಿ ಪತ್ರ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ , ನಬಾರ್ಡ್ ನ ಜಿಲ್ಲಾ ಅಭಿವೃದ್ಧಿ ಪ್ರಬಂಧಕಿ ಶ್ರೀಮತಿ ಸಂಗೀತಾ ಎಸ್, ಬಂದಾರು ಕಡಮಾಜೆ ಫಾರ್ಮ್ ಪ್ರಗತಿಪರ ಕೃಷಿಕ ಜಯಪ್ರಕಾಶ್, ಪ್ರಗತಿ ಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಸಿರಿ ಸಂಸ್ಥೆ ನಿರ್ದೇಶಕ ಜನಾರ್ದನ್ , ಅಶೋಕ್ ಮಿನೇಜಸ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಿಹೆಚ್ಎಸ್ ಸಿ ಪ್ರಾದೇಶಿಕ ನಿರ್ದೇಶಕ ಅಬ್ರಹಾಂ ಎಂ.ಕೆ, ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಉಪಸ್ಥಿತರಿದ್ದರು.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!