32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು.


ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಡಾಜೆ ಫ್ರೌಡ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ರಾಷ್ಟ್ರೀಯ ಕ್ರೀಡಾಪಟು ಗುಣಪಾಲ್ ಎಂ.ಎಸ್ ಉದ್ಘಾಟಿಸಿ, ಕಾರ್ಯಕ್ರಮದ ಕುರಿತು ಮಾತನಾಡಿ ಕ್ರೀಡಾ ಸಾಧನೆಯನ್ನು ಕೊಂಡಾಡಿದರು. ಹಾಗೂ ಇನ್ನೋರ್ವ ಅತಿಥಿಯಾಗಿ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿ ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಹೆಗ್ಡೆ ಉಪಸ್ಥಿತರಿದ್ದು, ಕ್ರೀಡಾ ವಿದ್ಯಾರ್ಥಿ ಗಳನ್ನು ಕುರಿತು ಶಿಕ್ಷಣದ ಜೊತೆಗೆ ಕ್ರೀಡೆ ಯು ದೈಹಿಕ ಹಾಗೂ ಮಾನಸಿಕ ಸ್ಥಿರವನ್ನು ಹೆಚ್ಚಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದರು. ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕ್ರೀಡಾ ನಿರ್ದೇಶಕ ಹಾಗೂ ಮುಖ್ಯಸ್ಥರಾದ ರಮೇಶ್. ಹೆಚ್ ಉಪಸ್ಥಿತರಿದ್ದರು.


ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತರಬೇತುದಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಕರಾದ ಸುದೀನ ಸ್ವಾಗತಿಸಿ, ಸ್ಪೋರ್ಟ್ಸ್ ಕ್ಲಬ್ ನ ವಿದ್ಯಾರ್ಥಿ ಕಾರ್ತಿಕ್ ವಂದಿಸಿದರು.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya
error: Content is protected !!