ಬೆಳ್ತಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದರು ಎಂಬ ಆರೋಪದಲ್ಲಿ 2018ನೇ ಇಸವಿಯಲ್ಲಿ ಉಜಿರೆ ಗ್ರಾಮದ ಕಾಶಿಬೆಟ್ಟು ಬಳಿ ಪೊಲೀಸ್ ಪೇದೆ ಹರೀಶ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿ ಧರ್ಮಸ್ಥಳ ಗ್ರಾಮದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಎಂಬವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 353 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಪೊಲೀಸ್ ಉಪ ನಿರೀಕ್ಷಕರು ಆಗಿದ್ದ ನಂದಕುಮಾರ್ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಬಿಜಿ ರವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಆರೋಪಿಗಳ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ತೀರ್ಪು ನೀಡಿ ಇಂದು ಸೆ.1ರಂದು ಆರೋಪಿಗಳನ್ನು ಖುಲಾಸೆಗೊಳಿಸಿದರು. ಆರೋಪಿಗಳ ಪರವಾಗಿ ಬೆಳ್ತಂಗಡಿಯ ನ್ಯಾಯವಾದಿ ಕೇಶವ ಗೌಡ ಪಿ ರವರು ವಾದಿಸಿದ್ದರು.