38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಬೆಳ್ತಂಗಡಿ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮವನ್ನು  ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ದಯಾಮಣಿ  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ ಅಧ್ಯಕ್ಷತೆ ವಹಿಸಿದ್ದರು .ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ಅನಂತಕೃಷ್ಣ ಭಟ್, ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಸರಕಾರಿ ಪ್ರೌಢಶಾಲೆ ಪೆರ್ಲಬೈಪಾಡಿ ಶಾಲ ಮುಖ್ಯೋಪಾಧ್ಯಯ ಬಾಲಕೃಷ್ಣ ಕೊರಮೇರು, ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ಶಿವಪುತ್ರ ಸುಣಗಾರ , ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಾಲಕೃಷ್ಣ  ಬೇರಿಕೆ, ಪಂಚಾಯತ್ ಸದಸ್ಯರಾದ ಯಶವಂತ ಗೌಡ, ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿದರು. ಪ್ರವೀಣ್ ಕುಮಾರ್ ವಂದಿಸಿದರು. ರಾಮಚಂದ್ರ ದೊಡಮನಿ ನಿರೂಪಿಸಿದರು. ಶಾಲಾ ಸಮಗ್ರ ಪ್ರಥಮ ಪ್ರಶಸ್ತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ  ಹಾಗೂ ದ್ವಿತೀಯ ಸ್ಥಾನವನ್ನು  ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಹಾಗೂ ಸೈಂಟ್ ಸಾವಿಯೋ ಪ್ರೌಢಶಾಲೆ ಬೆಂದ್ರಾಳ ಪಡೆದುಕೊಂಡರು

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!