32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ತುಳುನಾಡ್ ಒಕ್ಕೂಟ ಸಂಘಟನೆಯ ಕಾರ್ಯಕರ್ತರ ಸಭೆಯು ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ವಹಿಸಿದ್ದರು.

ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲ್ಲೂಕು ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಕಾಶ್ ಪೂಜಾರಿ ಗೇರುಕಟ್ಟೆ , ಉಪಾಧ್ಯಕ್ಷರಾಗಿ ಪುರಂದರ ಗೌಡ ಶಿರ್ಲಾಲು, ಕಾರ್ಯದರ್ಶಿಯಾಗಿ ಚಂದ್ರಹಾಸ ಕುಂಬಾರ ಬಂದಾರು, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಸಾಲಿಯಾನ್, ಕೋಶಾಧಿಕಾರಿಯಾಗಿ ಅಶ್ವತ್ ಕುಲಾಲ್ ಅರ್ವ ಆಯ್ಕೆಯಾದರು ಮತ್ತು ಹತ್ತು ಜನರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಂಘಟನೆಯ ಸಂಸ್ಥಾಪಕರಾದ ಶೈಲೇಶ್ ಆರ್. ಜೆ. ಯವರು ನೂತನ ಯುವ ಘಟಕಕ್ಕೆ ಸಂಘಟನೆಯ ಧ್ಯೇಯ, ಉದ್ದೇಶಗಳ ಬಗ್ಗೆ ವಿವರಿಸಿ, ತುಳು ಚಳುವಳಿಯನ್ನು ಮುಂದುವರಿಸುವ ರೀತಿ, ಪ್ರಾದೇಶಿಕ ಚಳುವಳಿ ಯಶಸ್ಸು ಆಗಲು ಯುವ ಘಟಕ ಯುವಜನತೆಯೊಂದಿಗೆ ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು ಮತ್ತು ನೂತನ ಯುವ ಘಟಕದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ರಾಜು ಬಿ. ಎಚ್. ಸ್ವಾಗತಿಸಿ ನಿರ್ವಹಿಸಿ ವಂದಿಸಿದರು. ತುಳುನಾಡ್ ಒಕ್ಕೂಟ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
error: Content is protected !!