25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24ವ) ಮತ್ತು ಅಬ್ದುಲ್ ಸಲೀಂ (24ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸರು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ, ಇಬ್ಬರನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!