25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದೂರ್ ಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದೂರ್ ಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್ ನಿಂದ ಕನ್ನಾಜೆ, ಪಡ್ಲಾಡಿ,ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya
error: Content is protected !!