30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

ಇಳಂತಿಲ: ಇಲ್ಲಿಯ ರಿಫಾಯಿನಗರ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಬೂಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್(23ವ) ಮತ್ತು ಬಿಲಿಯೂರು ನಿವಾಸಿ ಸಲೀಂ ಹುಸೈನ್ (40ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಪೊಲೀಸರು ವಿಚಾರಿಸಿದಾಗ ಅವರು ಅಮಲು ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 120/2023 ಕಲಂ: 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya
error: Content is protected !!