24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಶೀಧರ್ ಭಟ್ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ಶ್ರೀಪ್ರಿಯ ಮತ್ತು ರಾಜರತ್ನ ಕಾರ್ಯಕ್ರಮ ನಿರೂಪಿಸಿದರು. ಸನ್ನಿಧಿ ಮತ್ತು ಕೃಷ್ಣಪ್ರಸಾದ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಜನಾ ವಾಲ್ತಾಜೆ ವಂದಿಸಿದರು.

Related posts

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!