April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!