ಬೆಳ್ತಂಗಡಿ: 2023ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸಾಹಿತಿ ರಾಮಕೃಷ್ಣ ಭಟ್ , ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಂದಾರಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಸುವರ್ಣ, ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಂಡೂರಿನ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಬಿ.ಆಯ್ಕೆಯಾಗಿದ್ದಾರೆ.
