30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ಕಾನೂನು ಸಲಹೆ ಪಡೆಯುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ,ಹರೀಶ್ ಪೂಂಜ,ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ್ ಕಾಮತ್ ,ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!